Posts

ಗಾಂಧಿ ಪಾರ್ಕ್ ಅಭಿವೃದ್ಧಿಗೆ ಶಾಸಕರ ಕಟ್ಟುನಿಟ್ಟಿನ ಸೂಚನೆ

Image
  ಗಾಂಧಿ ಪಾರ್ಕ್ ಅಭಿವೃದ್ಧಿಗೆ ಶಾಸಕರ ಕಟ್ಟುನಿಟ್ಟಿನ ಸೂಚನೆ ಶಿವಮೊಗ್ಗ ನಗರದ ಗಾಂಧಿ ಪಾರ್ಕ್‌ನ ಮೂಲಸೌಕರ್ಯಗಳ ಸುಧಾರಣೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಾಸಕರು ಪಾರ್ಕ್‌ಗೆ ಭೇಟಿ ನೀಡಿ, ಫೌಂಟೆನ್, ಈಜುಕೊಳ, ಮಕ್ಕಳ ರೈಲು ಹಾಗೂ ಆಟಿಕೆಗಳ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಸೂಚಿಸಿದರು. ಈಜುಕೊಳವನ್ನು ಸಾರ್ವಜನಿಕರ ಬಳಕೆಗೆ ತರಲು , ಮಕ್ಕಳ ರೈಲು ದುರಸ್ತಿಗೊಳಿಸಲು ಹಾಗೂ ಪಾರ್ಕ್‌ನ ಕೊಳವನ್ನು ಅಭಿವೃದ್ಧಿಪಡಿಸಲು ನಿರ್ದೇಶನ ನೀಡಿದರು. ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವರದಿ ನದೀಮ್ ಕೆ ಮ್ 

ಶಿವಮೊಗ್ಗ ಅರಣ್ಯ ಸಮಸ್ಯೆಗೆ ಪರಿಹಾರಕ್ಕೆ ರಾಘವೇಂದ್ರ ಮನವಿ

Image
  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜ್ವಲಂತ ಅರಣ್ಯ ಸಮಸ್ಯೆಗಳಿಗೆ ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಬೆಂಗಳೂರು, ಆ. 21: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಅರಣ್ಯ, ವನ್ಯಜೀವಿಧಾಮ ಹಾಗೂ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಆಗ್ರಹಿಸಿ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ವಿಸ್ತೃತ ಮನವಿ ಸಲ್ಲಿಸಿದರು. ಈ ವೇಳೆ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರೊಂದಿಗೆ ಕೂಡ ಸಂಸದರು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಶೆಟ್ಟಿಹಳ್ಳಿ ಅಭಯಾರಣ್ಯದ ಗಡಿ ಮರು ವಿಂಗಡಣೆ, ಶರಾವತಿ ಸಂತ್ರಸ್ತರ ಪುನರ್ವಸತಿ, ಕೊಡಚಾದ್ರಿ ಕೇಬಲ್ ಕಾರ್ ಯೋಜನೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಸಂಸದರು ಸಚಿವರ ಮುಂದಿಟ್ಟರು. ಶೆಟ್ಟಿಹಳ್ಳಿ ವನ್ಯಜೀವಿಧಾಮದ 397.96 ಚದರ ಕಿ.ಮೀ. ವ್ಯಾಪ್ತಿಯ ಗಡಿ ಮರು ವಿಂಗಡಣೆಯ ಅಂತಿಮ ಅಧಿಸೂಚನೆ ಹೊರಡಿಸುವುದು ಹಾಗೂ ಬಫರ್ ಜೋನ್ ಗಡಿ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಶಿಫಾರಸು ಕಳುಹಿಸುವಂತೆ ಮನವಿ ಮಾಡಿದರು. ಅದೇ ರೀತಿ, ಶರಾವತಿ ಸಿಂಹ-ಬಾಲದ ಮಕಾಕ್ ಅಭಯಾರಣ್ಯದ ಗಡಿ ಅಂತಿಮಗೊಳಿಸುವ ಪ್ರಕ್ರಿಯೆಯ...

ಬಿಜೆಪಿಗೆ ಪ್ರಜಾಪ್ರಭುತ್ವದ ಗೌರವವಿಲ್ಲ! ಸದನಕ್ಕೆ ಅಡ್ಡಿ: ಸಚಿವ ಮಧು ಬಂಗಾರಪ್ಪ ಕಿಡಿ

Image
  ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ ಬೆಂಗಳೂರು, ಆ.21: ವಿಧಾನಮಂಡಲದ ಕಲಾಪಕ್ಕೆ ಬಿಜೆಪಿ ಶಾಸಕರು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ, ಶಿಕ್ಷಣ, ರೈತರು, ಯುವಜನರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ವಿಧಾನಮಂಡಲದಲ್ಲಿ ಸಮಗ್ರ ಚರ್ಚೆ ನಡೆಯಬೇಕಿದೆ. ಆದರೆ ಬಿಜೆಪಿ ಸದಸ್ಯರು ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಲು ಆಸಕ್ತಿ ಇಲ್ಲ. ಜನರ ಸಮಸ್ಯೆಗಳಿಗಿಂತ ಬಿಜೆಪಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ ಎಂದು ಸಚಿವರು ಆರೋಪಿಸಿದರು. ಯಾವುದೇ ವಿಷಯದ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ ಪ್ರತಿಪಕ್ಷವು ರಚನಾತ್ಮಕ ಚರ್ಚೆಗೆ ಮುಂದಾಗದೆ ಸದನದ ಕಲಾಪವನ್ನು ಅಡ್ಡಿಪಡಿಸುವುದನ್ನೇ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ ಎಂದು ಮಧು ಬಂಗಾರಪ್ಪ ದೂರಿದರು. ವಿಧಾನಮಂಡಲದ ಕಲಾಪ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ನೀತಿ-ನಿರ್ಧಾ...

ಭದ್ರಾವತಿಯಲ್ಲಿ ಭರ್ಜರಿ ಪೊಲೀಸ್ ಕಾರ್ಯಾಚರಣೆ! ತಡಸ ಮನೆ ಕಳ್ಳತನ ಪ್ರಕರಣ ಭೇದಿಸಿ, ₹6.89 ಲಕ್ಷ ಮೌಲ್ಯದ ಚಿನ್ನಾಭರಣ ವಶ!

Image
  ಭದ್ರಾವತಿಯಲ್ಲಿ ಭರ್ಜರಿ ಪೊಲೀಸ್ ಕಾರ್ಯಾಚರಣೆ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು  ಭದ್ರಾವತಿ: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಡಸ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 17ರಂದು ತಡಸ ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಅಡುಗೆ ಕೋಣೆಯ ವೆಂಟಿಲೇಟರ್ ಮೂಲಕ ಮನೆಯೊಳಗೆ ಪ್ರವೇಶಿಸಿ, ಸುಮಾರು 6.39 ಲಕ್ಷ ರೂಪಾಯಿ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ನೀಡಲಾದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 177/2026 , ಬಿ.ಎನ್.ಎಸ್ ಕಾಯ್ದೆಯ ಕಲಂ 331(3), 305(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್. ಬಿ., ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ವಿ.ಜಿ. ಅವರ ಸಹಕಾರ ಹಾಗೂ ಭದ್ರಾವತಿ ಉಪವಿಭಾಗದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್...

13 ವರ್ಷಗಳ ಬಳಿಕ ಪೊಲೀಸರ ಬಲೆಗೆ! ವಾರೆಂಟ್ ಆರೋಪಿ ಕೊನೆಗೂ ಬಂಧನ!

Image
  13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಭದ್ರಾವತಿ : ನ್ಯೂ ಟೌನ್ ಪೊಲೀಸ್ ಠಾಣೆಯ 2010ನೇ ಸಾಲಿನ ಕಲಂ 379 ಐಪಿಸಿ ಪ್ರಕರಣದಲ್ಲಿ ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ನಿವಾಸಿ ಮಂಜುನಾಥ ಎಂಬಾತನ ವಿರುದ್ಧ ಭದ್ರಾವತಿಯ ಘನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಸಿಸಿ ನಂ. 1790/2010ರ ಪ್ರಕರಣದಲ್ಲಿ ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ, ವಾರೆಂಟ್ ಆಸಾಮಿ ಮಂಜುನಾಥನನ್ನು ದಸ್ತಗಿರಿ ಮಾಡಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವರದಿನ ನದೀಮ್  ಕೆಎಂ 

ಶಾಂತಿನಗರದಲ್ಲಿ ಈದ್ ಮೀಲಾದ್–ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆ

Image
ಶಾಂತಿನಗರದಲ್ಲಿ ಈದ್ ಮೀಲಾದ್–ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆ ಶಿವಮೊಗ್ಗ : ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮೀಲಾದ್ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಶಾಂತಿನಗರಕ್ಕೆ ಮೊದಲ ಬಾರಿಗೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರನ್ನು ಶಾಂತಿನಗರದ ಜನತೆಯ ಪರವಾಗಿ ಶಹಾಬುದ್ದಿನ್ ಬಾಬು ಅವರ ನೇತೃತ್ವದಲ್ಲಿ ಮುಖಂಡರು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಂತಿನಗರದ ಮುಖಂಡರಾದ ನಾಗರಾಜಣ್ಣ, ನೂರ್ ಮಸೀದಿ ಅಧ್ಯಕ್ಷರಾದ ಭಾಷಸಾಬ್ ಹುಣಸಘಟ್ಟ, ವಕೀಲರಾದ ರಾಮಚಂದ್ರ, ಶಾಂತಿನಗರ ನಾಗರಿಕ ಹಕ್ಕುಗಳ ವೇದಿಕೆ ಅಧ್ಯಕ್ಷರಾದ ಸಯ್ಯದ್ ಮುಜಿಬುಲ್ಲ, ಬಸವರಾಜ್, ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಧೀರರಾಜ್ ಹೊನ್ನವಿಲೇ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಸಭೆಯಲ್ಲಿ DYSP ಸಂಜೀವಕುಮಾರ್ ಹಾಗೂ CPI ರಾಘವೇಂದ್ರ ಅವರು ಭಾಗವಹಿಸಿದ್ದರು. ಈದ್ ಮೀಲಾದ್ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯಿತು. ವಿವಿಧ ಸಮಾಜಗಳ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ, ಪ್ರದೇಶದ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಕುರಿತು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದರು. ಎಲ್ಲಾ ಸಮಾಜಗಳ ಮುಖಂಡರು ಹಾಗೂ ಸಾರ್ವಜನಿಕರು ಒಗ್ಗೂಡಿ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವ ಮೂಲಕ ಶಾಂ...

ಶಿವಮೊಗ್ಗದಲ್ಲಿ ಪೊಲೀಸ್ ಅಲರ್ಟ್: ಈದ್ ಮಿಲಾದ್, ಗಣಪತಿ ಹಬ್ಬದ ಹಿನ್ನೆಲೆ ಭರ್ಜರಿ ಪಥಸಂಚಲನ ರಾಗಿಗುಡ್ಡದಲ್ಲಿ SAF–RAF ಪಡೆಗಳ ರೂಟ್ ಮಾರ್ಚ್

Image
ಶಿವಮೊಗ್ಗದಲ್ಲಿ ಈದ್ ಮಿಲಾದ್, ಗಣಪತಿ ಹಬ್ಬದ ಹಿನ್ನೆಲೆ ಪೊಲೀಸ್ ಅಲರ್ಟ್ ಈದ್ ಮಿಲಾದ್ ಹಾಗೂ ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಪೊಲೀಸ್ ಪಡೆಗಳಿಂದ ಪಥಸಂಚಲನ ನಡೆಸಲಾಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು. ಈ ವೇಳೆ ಪೊಲೀಸ್ ತುಕಡಿ, SAF ಹಾಗೂ RAF ಪಡೆಗಳ ಸಿಬ್ಬಂದಿ ಭಾಗವಹಿಸಿದ್ದರು. ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಪೊಲೀಸ್ ಪಡೆಗಳಿಂದ ರೂಟ್ ಮಾರ್ಚ್ ನಡೆಸಲಾಯಿತು. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಸೇರಿದಂತೆ SAF ಮತ್ತು RAF ಅಧಿಕಾರಿಗಳ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಈದ್ ಮಿಲಾದ್ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹಾಗೂ ಗಸ್ತು ಹೆಚ್ಚಿಸಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ವರದಿ ನದೀಂ ಕೆ ಎಂ